ಮುಖ್ಯಮಂತ್ರಿ ವಿರುದ್ಧ ದ್ವೇಷ ರಾಜಕಾರಣ: ರಫೀಉಲ್ಲಾ

| Published : Oct 01 2024, 01:19 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಗಟ್ಟಿಯಾಗಿದೆ. ಇಲ್ಲಿ ಆಪರೇಷನ್ ಕಮಲಕ್ಕೆ ಯಾವುದೇ ರೀತಿಯ ಅವಕಾಶ ಇಲ್ಲ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್.ಡಿ.ಎ ಸರ್ಕಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದ್ದು ಇದು ಖಂಡನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಬಿ.ಎಸ್. ರಫೀ ಉಲ್ಲಾ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನತೆಗೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಪೂರೈಸಿರುವುದು ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿದೆ ಎ₹ದರು.

ಆಪರೇಷನ್‌ಗೆ ಅವಕಾಶ ಇಲ್ಲ

ಹೇಗಾದರೂ ಮಾಡಿ ರಾಜಕೀಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮಣಿಸಲೇಬೇಕೆಂಬ ಉದ್ದೇಶದಿಂದ ರಾಜಕೀಯ ಕಾರಣಗಳಿಗಾಗಿ ಮುಡಾ ಪ್ರಕರಣ ಕೈಗೆತ್ತಿಕೊಂಡು ದ್ವೇಷ ರಾಜಕಾರಣ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಗಟ್ಟಿಯಾಗಿದೆ. ಇಲ್ಲಿ ಆಪರೇಷನ್ ಕಮಲಕ್ಕೆ ಯಾವುದೇ ರೀತಿಯ ಅವಕಾಶ ಇಲ್ಲ ಎಂದರು.

ಸಿದ್ದರಾಮಯ್ಯರವರು ಮೂಡಾ ಪ್ರಕರಣವನ್ನು ಸಮರ್ಥವಾಗಿ ಎದುರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ರಾಜ್ಯದ ಅಲ್ಪಸಂಖ್ಯಾತರು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಬೆಂಬಲವಾಗಿ ನಿಂತಿದ್ದಾರೆ. ಒಂದು ವೇಳೆ ಅವರನ್ನು ಮಣಿಸಲು ಪ್ರಯತ್ನಿಸಿದರೆ ರಾಜ್ಯದಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರು ತೀವ್ರವಾಗಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.