ಕನ್ನಡಪ್ರಭ ವಾರ್ತೆ ಚಿಕ್ಕೋಡಿ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ- 2025 ವಿರುದ್ಧ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದಿಂದ ಬುಧವಾರ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಹಕ್ಕೋತ್ತಾಯ ಮನವಿಯನ್ನು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೊಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ- 2025 ವಿರುದ್ಧ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದಿಂದ ಬುಧವಾರ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಹಕ್ಕೋತ್ತಾಯ ಮನವಿಯನ್ನು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೊಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಬಿಜೆಪಿ ಜಿಲ್ಲಾ ಕಚೇರಿಯಿಂದ ಬಸವೇಶ್ವರ ವೃತ್ತದವರೆಗೆ ಹಾಗೂ ಎ.ಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪ್ರತಿಭಟನೆ ಮಾಡಿ ರಾಜ್ಯಪಾಲರಿಗೆ ಹಕ್ಕೋತಾಯ ಮನವಿಯನ್ನು ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಜಿಲ್ಲಾ ಕಾರ್ಯದರ್ಶಿ ಸಂಜೀವ ಪಾಟೀಲ, ಚಿಕ್ಕೋಡಿ -ಸದಲಗಾ ಮಂಡಲ ಅಧ್ಯಕ್ಷ ಪವನ ಮಹಾಜನ, ರಮೇಶ ಕಾಳನ್ನವರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಜಿಲ್ಲಾ ಸಾಮಾಜಿಕ ಜಾಲತಾಣ ಸಹ-ಪ್ರಮುಖ ಆಶಾರಾಣಿ ಪಾಟೀಲ, ಜಿಲ್ಲಾ ಸಹ-ವಕ್ತಾರ ರಾವಸಾಬ ಕಮತೆ, ಶಕುಂತಲಾ ಡೋಣವಾಡೆ, ವಿಶ್ವನಾಥ ಕಾಮಗೌಡ, ಜಿಲ್ಲಾ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ನಾಯಿಕ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.