ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವ ಸಲ್ಲದು:ಶೋಭಲತಾ

| Published : Mar 16 2024, 01:55 AM IST

ಸಾರಾಂಶ

ಮಹಿಳೆ ಇಂದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಖ್ಯವಾಹಿನಿಯಲ್ಲಿ ಪುರುಷರಿಗೆ ಸರಿಸಮಾನವಾಗಿ ಸಾಧನೆ ಹಾದಿಯಲ್ಲಿದ್ದಾಳೆ. ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವನೆ ಸಲ್ಲದು ಎಂದು ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಲತಾ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಮಹಿಳೆ ಇಂದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಖ್ಯವಾಹಿನಿಯಲ್ಲಿ ಪುರುಷರಿಗೆ ಸರಿಸಮಾನವಾಗಿ ಸಾಧನೆ ಹಾದಿಯಲ್ಲಿದ್ದಾಳೆ. ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವನೆ ಸಲ್ಲದು ಎಂದು ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಲತಾ ಹೇಳಿದರು.ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಂಜೀವಿನಿ ಒಕ್ಕೂಟ, ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಾಹಿತ್ಯ,ಶಿಕ್ಷಣ ,ವಿಜ್ಞಾನ,ರಾಜಕೀಯ,ಆಡಳಿತ,ಬಾಹ್ಯಾಕಾಶ,ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಪುರುಷನಿಗೆ ಸರಿ, ಸಮಾನವಾಗಿ ಸಾಧನೆ ಮಾಡಿದ್ದಾಳೆ. ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಆ ಕಾಲದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದರು. ಮದರ್‌ ತೆರೆಸಾ, ಗಾರ್ಗೇಯಿ, ಮೈತ್ರೇಯಿ , ಸ್ವಾತಂತ್ಕ್ಯಕ್ಕಾಗಿ ಹೋರಾಡಿದ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಹೀಗೆ ಮಹಿಳೆಯರು ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದರು. ತಾಪಂ ಇಒ ಸುದೀಪ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಜೀವಿನಿ ಒಕ್ಕೂಟದ ಸುಮಿತ್ರಾ,ಇನ್ನರ್‌ ವ್ಹೀಲ್‌ ನ ಅಶ್ವಿನಿ, ವಕೀಲೆ ರಾಜೇಶ್ವರಿ, ಪ್ರಭಾರ ಸಿಡಿಪಿಒ ರಾಘವೇಂದ್ರ, ಪಪಂ ಮುಖ್ಯಾಧಿಕಾರಿ ಶ್ರೀಪಾದ್‌ ಮತ್ತಿತರರು ಇದ್ದರು.15 ಶ್ರೀ ಚಿತ್ರ 1-

ಶೃಂಗೇರಿ ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ ಕಾರ್ಯಕ್ರಮವನ್ನು ತಾಪಂ ಇಒ ಸುದೀಪ್‌ ಉದ್ಘಾಟಿಸಿದರು.