ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಬುಧವಾರ ಸಂಜೆ ಗದಗ ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಗದಗ ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ. ಮೋದಿ ಆಡಳಿತಕ್ಕೆ ಸಿಕ್ಕ ಜಯಕನ್ನಡಪ್ರಭ ವಾರ್ತೆ ಗದಗ
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಬುಧವಾರ ಸಂಜೆ ಗದಗ ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಕ್ಷದ ಪರ ಘೋಷಣೆ ಕೂಗಿದರು. ಪರಸ್ಪರ ಸಿಹಿ ತಿನಿಸಿ ಗೆಲುವಿನ ಸಂಭ್ರಮ ಹಂಚಿಕೊಂಡರು. ಪಟಾಕಿ ಸಿಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಎಸ್.ವಿ.ಸಂಕನೂರ ಅವರ ಗೆಲುವು ಕೇವಲ ಒಬ್ಬ ಅಭ್ಯರ್ಥಿಯ ಗೆಲುವಲ್ಲ. ಇದು ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ನಡೆಸಿದ ಸಂಘಟಿತ ಪ್ರಯತ್ನಕ್ಕೆ ದೊರೆತ ಫಲವಾಗಿದೆ ಎಂದು ಹೇಳಿದರು.ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರು ಅಭಿವೃದ್ಧಿ, ಪ್ರಾಮಾಣಿಕತೆ ಮತ್ತು ಸಂಘಟಿತ ನಾಯಕತ್ವಕ್ಕೆ ಆದ್ಯತೆ ನೀಡಿದ್ದಾರೆ. ಸಂಕನೂರ ಅವರ ಗೆಲುವು ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ನೀಡಲಿದೆ. ಗದಗ ಜಿಲ್ಲೆಯಲ್ಲಿ ಬಿಜೆಪಿ ಇನ್ನಷ್ಟು ಸದೃಢವಾಗಿ ಸಂಘಟನೆಯಾಗಲು ಈ ಗೆಲುವು ಪ್ರೇರಣೆಯಾಗಲಿದೆ ಎಂದರು.
ವಿಜಯೋತ್ಸವದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಮುಖಂಡರು, ಯುವ ಘಟಕದ ಕಾರ್ಯಕರ್ತರು, ಮಹಿಳಾ ಘಟಕದ ಮುಂಚೂಣಿ ನಾಯಕಿಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರು ನನ್ನ ಮೇಲೆ ಮತ್ತೊಮ್ಮೆ ವಿಶ್ವಾಸವಿಟ್ಟು ನೀಡಿರುವ ಈ ಗೆಲುವು ನನ್ನದಲ್ಲ; ಇದು ಕ್ಷೇತ್ರದ ಪ್ರತಿಯೊಬ್ಬ ಪದವೀಧರ ಮತದಾರರ ಗೆಲುವು. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನನ್ನೊಂದಿಗೆ ನಿಂತ ಎಲ್ಲರ ಪರಿಶ್ರಮಕ್ಕೆ ಈ ಜಯ ಸಲ್ಲುತ್ತದೆ. ಮುಂದಿನ ಅವಧಿಯಲ್ಲೂ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಧ್ವನಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನಗೆ ನೀಡಿರುವ ಈ ಜನಾದೇಶವನ್ನು ಜವಾಬ್ದಾರಿಯಾಗಿ ಸ್ವೀಕರಿಸಿ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಸಲ್ಲಿಸುವ ಸಂಕಲ್ಪ ಮಾಡುತ್ತೇನೆ ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದ್ದಾರೆ.