ಹಾವೇರಿ ಜಿಲ್ಲಾದ್ಯಂತ ದೀಪಾವಳಿ ಹಬ್ಬದ ಸಿದ್ಧತೆ ಜೋರುಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಜಿಲ್ಲಾದ್ಯಂತ ಭರದ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಮನೆ, ಮನೆಗೂ ಬೆಳಕಿನ ಮೆರುಗು ನೀಡಲು ಬಗೆಬಗೆಯ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರೆ, ಮಣ್ಣಿನ ಹಣತೆಗಳ ಖರೀದಿಯಲ್ಲಿ ಜನ ಆಸಕ್ತಿ ತೋರಿದ್ದಾರೆ.