ಪೊಲೀಸರ ಮೇಲೆ ಹಲ್ಲೆ: ಇಬ್ಬರು ಆರೋಪಿಗಳಿಗೆ ಗುಂಡೇಟು, ಗುತ್ತಿಗೆದಾರ ಕೊಲೆ ಪ್ರಕರಣ: 6 ಆರೋಪಿಗಳ ಬಂಧನಆರೋಪಿಗಳನ್ನು ಬಂಧಿಸಿ ಕರೆತರುವಾಗ ಹಾನಗಲ್ಲ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಹಾಗೂ ಹಾನಗಲ್ಲ ಪಿಎಸ್‌ಐ ಸಂಪತ್ ಆನಿಕಿವಿ ಆತ್ಮರಕ್ಷಣೆಗಾಗಿ ಪ್ರಮುಖ ಆರೋಪಿಗಳಾದ ನಾಗರಾಜ ಸವದತ್ತಿ ಎಡಗಾಲಿಗೆ ಹಾಗೂ ಅಶ್ರಫ್‌ಖಾನ್ ಪಠಾಣ ಬಲಗಾಲಿಗೆ ಗುಂಡು ಹೊಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.