ಸ್ವಾತಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸುವಂತೆ 23ರಂದು ಪ್ರತಿಭಟನೆಜಿಲ್ಲೆಯ ರಟ್ಟೀಹಳ್ಳಿ ತಾಲೂಕು ಮಾಸೂರಿನ ಯುವತಿ ಸ್ವಾತಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದು, ಪ್ರಮುಖ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವುದು, ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಹಾಗೂ ಹೆಚ್ಚಿನ ಪರಿಹಾರಕ್ಕೆ ಆಗ್ರಹಿಸಿ ಏ. 23ರಂದು ಹಾವೇರಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ಬ್ರಿಗೇಡ್ನ ಕಾರ್ಯಾಧ್ಯಕ್ಷ ಕೆ.ಇ. ಕಾಂತೇಶ ಹೇಳಿದರು.