ಹಾವೇರಿ ಜಿಲ್ಲೆಯಲ್ಲಿ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ವರ್ಷಜಿಲ್ಲೆಯು ರಾಜಕೀಯವಾಗಿ ಈ ವರ್ಷ ಹಲವು ಬದಲಾವಣೆಗಳನ್ನು ಕಂಡಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸದರೆ, ಅವರ ಶಾಸಕ ಸ್ಥಾನದ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಂಡು ಸಮಾಧಾನ ಪಟ್ಟುಕೊಂಡರೆ, ವರ್ಷಾಂತ್ಯದಲ್ಲಿ ಶಿಗ್ಗಾಂವಿ ಉಪಚುನಾವಣೆ ಗೆಲುವಿನೊಂದಿಗೆ ಇಡಿ ಜಿಲ್ಲೆಯನ್ನು ಬಿಜೆಪಿ ಮುಕ್ತಗೊಳಿಸಿ ಕಾಂಗ್ರೆಸ್ ಸಂಭ್ರಮಿಸಿರುವುದು ಈ ವರ್ಷದ ಜಿಲ್ಲೆಯ ರಾಜಕೀಯ ಹೈಲೈಟ್ಸ್.