ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆ ತಂದಿದ್ದ ಮನಮೋಹನ್ ಸಿಂಗ್-ಸಂಸದ ಬೊಮ್ಮಾಯಿಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದರು. ದೇಶದ ಆರ್ಥಿಕತೆಗೆ ದೊಡ್ಡ ಬದಲಾವಣೆ ತಂದಿದ್ದರು. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.