ಹಾವೇರಿ ಜಿಲ್ಲೆಯಲ್ಲಿ ವಿಸ್ತಾರವಾಗುತ್ತಿರುವ ಚೆಂಡು ಹೂವಿನ ಬೆಳೆನವರಾತ್ರಿ, ದೀಪಾವಳಿ ಸೇರಿದಂತೆ ಹಬ್ಬದ ದಿನಗಳಲ್ಲಿ ಮಾತ್ರ ಬೇಡಿಕೆ ಇರುತ್ತಿದ್ದ ಚೆಂಡು ಹೂವಿನ ಬೆಳೆ ಪ್ರಸ್ತುತ ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಯಾಗುವತ್ತ ದಾಪುಗಾಲಿಡುತ್ತಿದೆ. ಉತ್ತಮ ಇಳುವರಿ ಮತ್ತು ದರವೂ ಸಿಗುತ್ತಿರುವುದರಿಂದ ರೈತರು ಚೆಂಡು ಹೂ ಬೆಳೆಯಲು ಆಸಕ್ತಿ ತೋರುತ್ತಿದ್ದು, ವರ್ಷದಿಂದ ವರ್ಷಕ್ಕೆ ಬೆಳೆ ಪ್ರದೇಶ ವಿಸ್ತರಣೆಯಾಗುತ್ತಿದೆ.