ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹಹಮಾಲಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದಲ್ಲಿರುವ ಎಲ್ಲ ಕಾರ್ಮಿಕರಿಗೆ ಬದುಕಿರುವಾಗಲೇ ಸಹಾಯಕ್ಕೆ ಬರುವಂತೆ ಭವಿಷ್ಯನಿಧಿ, ಪಿಂಚಣಿ, ಆರೋಗ್ಯದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಒತ್ತಾಯಿಸಿದರು.