ಶಬರಿಮಲೈಗೆ ಹೊರಟಿದ್ದ ಮಿನಿ ಬಸ್ ಪಲ್ಟಿ, ಓರ್ವ ಸಾವುಹಾನಗಲ್ಲ ತಾಲೂಕಿನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಮಿನಿ ಬಸ್ನಲ್ಲಿ ಶಬರಿಮಲೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬುಧವಾರ ಬೆಳಗಿನ ಜಾವ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.