ಕನ್ನಡಿಗರಲ್ಲಿ ಕನ್ನಡಾಭಿಮಾನ ಕ್ಷೀಣಿಸುತ್ತಿರುವುದು ವಿಷಾದನೀಯ-ಮುಚ್ಚಂಡಿಕನ್ನಡ ಭಾಷೆಗೆ ವಿಶಿಷ್ಟ ಮೆರುಗು ತಂದುಕೊಟ್ಟ ವಚನ ಸಾಹಿತ್ಯ, ದಾಸ ಸಾಹಿತ್ಯದ ಪುನರ್ಜನ್ಮದಿಂದ ಅನಿಷ್ಟ ಪದ್ಧತಿಗಳ ಬೆಳವಣಿಗೆ ಕುಂಠಿತಗೊಳ್ಳುವ ಸಾಧ್ಯತೆ ಇದ್ದು, ಅವುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ನಿರ್ವಹಿಸುವ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗರಿಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಷಣ್ಮುಖಪ್ಪ ಮುಚ್ಚಂಡಿ ಹೇಳಿದರು.