ಬೆಳೆ ನಷ್ಟ ಪರಿಹಾರ, ಮಧ್ಯಂತರ ವಿಮೆ ನೀಡುವಂತೆ ಆಗ್ರಹಅತಿವೃಷ್ಟಿಯಿಂದ ತಾಲೂಕಿನಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಬೆಳೆ ಸಮೀಕ್ಷೆ ಮಾಡುವಲ್ಲಿ ತಾರತಮ್ಯ ಎಸಗಿದ್ದಾರೆ. ಈ ಕೂಡಲೇ ಬೆಳೆ ನಷ್ಟ ಪರಿಹಾರ ಹಾಗೂ ಮಧ್ಯಂತರ ಬೆಳೆ ವಿಮಾ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ರೈತ ಮುಖಂಡರು ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.