ವಕ್ಫ್ ಹೆಸರಿನಲ್ಲಿ ರೈತರ ಜಮೀನು ವಶಕ್ಕೆ ಪಡೆಯುವುದು ನಿಲ್ಲಿಸಿರೈತರ ಜಮೀನುಗಳನ್ನು ವಕ್ಫ್ ಹೆಸರಿನಲ್ಲಿ ವಶಕ್ಕೆ ಪಡೆಯುತ್ತಿದ್ದು, ಕೂಡಲೇ ಅದನ್ನು ನಿಲ್ಲಿಸಬೇಕೆಂದು ಹಾಗೂ ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ರೈತರು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.