ಶಿಷ್ಟಾಚಾರ ಉಲ್ಲಂಘನೆ ಆರೋಪ, ಶಿಗ್ಗಾಂವಿ ತಾಪಂ ಇಒ ಕಚೇರಿಗೆ ಬೀಗಶಿಗ್ಗಾಂವಿ ತಾಲೂಕಿನ ಜೇಕಿನಕಟ್ಟಿ ₹೬೫೦ ಲಕ್ಷ ವೆಚ್ಚದಲ್ಲಿ ಸರ್ಕಾರಿ ಮೆಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ತಾಲೂಕು ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.