ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹100 ಕೋಟಿ ಅನುದಾನಕಳೆದ ಹತ್ತು ವರ್ಷಗಳಲ್ಲಿ ಎರಡು ಬಾರಿ ಸಚಿವರಾಗಿ, ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿದ ಈ ಭಾಗದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡಿ ಅಭಿವೃದ್ಧಿಯ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ನಾನು ಇದೀಗ ಕ್ಷೇತ್ರದಲ್ಲಿ ಎಲ್ಲಿಯೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ ಎನ್ನುವುದನ್ನು ಮತದಾರರಿಂದ ಕೇಳುತ್ತಿದ್ದೇನೆ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹೧೦೦ ಕೋಟಿ ವಿಶೇಷ ಅನುದಾನವನ್ನು ನೀಡಿದ್ದೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.