ರೋಮಾಂಚನ ಸೃಷ್ಟಿಸಿದ ಹೋರಿ ಬೆದರಿಸುವ ಸ್ಪರ್ಧೆ`ಹಾವೇರಿ ರಾಕ್‌ಸ್ಟಾರ್’ `ಅನ್ನದಾತ’, ‘ಜನನಾಯಕ’, ‘ಘಟಸರ್ಪ’, `ಇತಿಹಾಸಕಾರ’, ‘ಮಿಡಿನಾಗರ’ ಸೇರಿದಂತೆ ಹತ್ತು ಹಲವು ಘಟಾನುಘಟಿಗಳು ಗತ್ತು ಗಮ್ಮತ್ತಿನೊಂದಿಗೆ ಆಖಾಡಕ್ಕೆ ಇಳಿದಿದ್ದವು. ಇವರನ್ನು ನೋಡಲೆಂದೇ ಸಾವಿರಾರು ಜನರು ಜಮಾಯಿಸಿದ್ದರು. ಅಖಾಡದಲ್ಲಿ ಇವರ ಓಟ ನೋಡುಗರನ್ನು ರೋಮಾಂಚನಗೊಳಿಸಿತು.