ಬೆಳೆಹಾನಿ ಪರಿಹಾರ ಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆಶಿಗ್ಗಾಂವಿ ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆಗಳು ಹಾನಿಯಾಗಿವೆ. ಗೋವಿನಜೋಳ, ಸೋಯಾಬೀನ್, ಹತ್ತಿ ಇತ್ತೀಚಿಗೆ ಎಡಬಿಡದೇ ಸುರಿದ ಮಳೆಯಿಂದ ಬಹುತೇಕ ಕಡೆ ಹಾನಿಯಾಗಿವೆ. ಬೆಳೆ ಹಾನಿ ಹಾಗೂ ಬೆಳೆ ವಿಮೆ ನೀಡಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿ ಹಾವೇರಿ ಜಿಲ್ಲಾಧಿಕಾರಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.