ಚಿಕ್ಕಬಾಸೂರಿನಲ್ಲಿ ಗುಂಪು ಘರ್ಷಣೆ, 10 ಜನರಿಗೆ ಗಾಯಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಿನ ಸಿದ್ದರಾಮೇಶ್ವರ ದೇವಸ್ಥಾನ ಟ್ರಸ್ಟ್ ಪದಾಧಿಕಾರಿಗಳ ಆಯ್ಕೆ ವೇಳೆ ಸಮನ್ವಯ ಏರ್ಪಡದ ಹಿನ್ನೆಲೆಯಲ್ಲಿ ಗುರುವಾರ ತಡ ರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಾಯಗೊಂಡ 8-10 ಜನರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ.