ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧದ ಪ್ರಕರಣದಲ್ಲಿ ಸತ್ಯಾಂಶ ಇಲ್ಲ-ತಳವಾರರಾಣಿಬೆನ್ನೂರಿನಲ್ಲಿ ಮಾರುತಿ ಮ್ಯಾನ್ ಪವರ್ ಡೆವಲಪ್ಮೆಂಟ್ ಸೊಸೈಟಿ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಿ ವಂಚಿಸಲಾಗಿದೆ ಎಂದು ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಖಾಸಗಿ ಪ್ರಕರಣದಲ್ಲಿ ಒಂದಿಂಚೂ ಸತ್ಯಾಂಶ ಇಲ್ಲ, ಇದೊಂದು ಸುಳ್ಳು ಆರೋಪ ಎಂದು ಮಾರುತಿ ಮ್ಯಾನ್ ಪವರ್ ಡೆವಲಪ್ಮೆಂಟ್ ಸೊಸೈಟಿ ಕಾರ್ಯದರ್ಶಿ ಬಸವರಾಜ ತಳವಾರ ಸ್ಪಷ್ಟಪಡಿಸಿದರು.