ಅರ್ಹರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಲ್ಪಿಸಿ: ಶಂಭನಗೌಡ್ರ ಪಾಟೀಲರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೊಳಿಸಿದ ಐದು ಯೋಜನೆಗಳು ನಿರಂತರವಾಗಿ ಮುಂದುವರಿದಿವೆ. ರಾಜ್ಯಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವ ಮೂಲಕ ಯೋಜನೆ ಕ್ರಮಬದ್ಧವಾಗಿ ಜಾರಿಗೊಳ್ಳಲು ಸರ್ಕಾರ ಯತ್ನಿಸಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಂಭನಗೌಡ್ರ ಪಾಟೀಲ ಹೇಳಿದರು.