ವಾಲ್ಮೀಕಿ ಜಯಂತಿ ಬಹಿಷ್ಕರಿಸಲು ಸಮಾಜದ ತೀರ್ಮಾನಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನೇಕ ಹಗರಣಗಳಲ್ಲಿ ಮುಳುಗಿ, ಹಿಂದುಳಿದ ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನು ನುಂಗಿ ಹಾಕಿ ಸಮಾಜಕ್ಕೆ ಅನ್ಯಾಯ ಮಾಡಿದೆ. ಕಾರಣ ಅ.17ರಂದು ನಡೆಯುವ ವಾಲ್ಮೀಕಿ ಜಯಂತಿಯನ್ನು ಪಕ್ಷಾತೀತವಾಗಿ ಬಹಿಷ್ಕರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಮಂಜುನಾಥ ತಳವಾರ ಘೋಷಿಸಿದರು.