ಗಣೇಶನ ಹಬ್ಬಕ್ಕೆ ಭರ್ಜರಿ ಸಿದ್ಧತೆ, ಮಾರುಕಟ್ಟೆಯಲ್ಲಿ ಖರೀದಿ ಭರಾಟೆಗಣೇಶ ಚತುರ್ಥಿ ಹಬ್ಬವನ್ನು ಶನಿವಾರ ಎಲ್ಲೆಡೆ ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆದಿದ್ದು, ವಿಘ್ನನಿವಾರಕ ಗಣೇಶನನ್ನು ಶ್ರದ್ಧಾಭಕ್ತಿಯಿಂದ ಸ್ವಾಗತಿಸಲು ಭಕ್ತರು ಅಣಿಯಾಗಿದ್ದಾರೆ. ಈಗಾಗಲೇ ವಿವಿಧ ಆಕಾರ, ವರ್ಣಗಳಿಂದ ಗಣೇಶನ ಮೂರ್ತಿಗಳು ತಯಾರಾಗಿದ್ದು, ಶುಕ್ರವಾರ ಮಾರುಕಟ್ಟೆಯಲ್ಲಿ ಹಬ್ಬದ ಸಿದ್ಧತೆ ಜೋರಾಗಿ ನಡೆಯಿತು.