ವಕ್ಫ್ ಆಸ್ತಿಗಳ ಪ್ರಕರಣಗಳನ್ನು ತಿಂಗಳೊಳಗಾಗಿ ಇತ್ಯರ್ಥಪಡಿಸಿಜಿಲ್ಲೆಯಲ್ಲಿ ಬಾಕಿ ಇರುವ ವಕ್ಪ್ ಆಸ್ತಿಗಳ ಪ್ರಕರಣಗಳನ್ನು ಒಂದು ತಿಂಗಳೊಳಗಾಗಿ ಇತ್ಯರ್ಥಪಡಿಸಬೇಕು. ತಹಸೀಲ್ದಾರ್‌ಗಳು ಆಸ್ತಿಗಳ ಫ್ಲಾಗಿಂಗ್ ಅನ್ನು ಶೀಘ್ರವಾಗಿ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಝಡ್. ಜಮೀರ್ ಅಹ್ಮದಖಾನ್ ಎಚ್ಚರಿಕೆ ನೀಡಿದರು.