ಮೂರು ಪ್ರೌಢಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೆಗ್ರಾಮೀಣ ಪ್ರದೇಶದ ಯಾವ ಮಕ್ಕಳೂ ಸಹ ಶಿಕ್ಷಣದಿಂದ ವಂಚಿತರಾಗಬಾರದು, ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ಸಿಗಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದು, ಮೊದಲ ಹಂತದಲ್ಲಿ ತಾಲೂಕಿನ 3 ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.