ಎಕರೆಗೆ ₹25 ಸಾವಿರ ಬೆಳೆಹಾನಿ ಪರಿಹಾರ ನೀಡಲು ರೈತ ಸಂಘ ಆಗ್ರಹಗೋವಿನಜೋಳ, ಹತ್ತಿ, ಸೋಯಾಬಿನ್, ಭತ್ತ ಬಿತ್ತನೆಯಾಗಿದ್ದು, ಜಿಲ್ಲೆಯಲ್ಲಿ 35 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಇಲಾಖೆಗೆ ಬೆಳೆಹಾನಿ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಹಿರೇಕೆರೂರು ತಾಲೂಕಿನ 11,500 ರೈತರು ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ಕೂಡಲೇ ಸಮೀಕ್ಷೆ ಮಾಡಿ ಪರಿಹಾರ ವಿತರಿಸಬೇಕು ಎಂದು ರೈತರು ಒತ್ತಾಯಿಸಿದರು.