ಬಾಲ್ಯವಿವಾಹ, ಬಾಲಕಿಯರ ಗರ್ಭಿಣಿ ಪ್ರಕರಣಗಳಿಗೆ ಕಡಿವಾಣ ಹಾಕಿಹೆಚ್ಚುತ್ತಿರುವ ಬಾಲ್ಯವಿವಾಹ ಪ್ರಕರಣ ಅವಲೋಕಿಸಿದರೇ ನಾವೆಷ್ಟೇ ಮುಂದುವರಿದಿದ್ದರೂ ಇನ್ನೂ ಅನಾಗರಿಕರಂತೆ ವರ್ತಿಸುತ್ತಿದ್ದೇವೆನೋ ಎಂದೆನಿಸುತ್ತದೆ. ತಾಲೂಕಿನಲ್ಲಿ ಬಾಲ್ಯವಿವಾಹ ಮತ್ತು ಬಾಲಕಿಯರ ಗರ್ಭಿಣಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶಿಶು ಅಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಜಾಗೃತಿ ಮೂಡಿಸುವ ಮೂಲಕ ಸಮನ್ವಯತೆಯಿಂದ ನಿರ್ವಹಿಸಿ ಕಡಿವಾಣ ಹಾಕುವಂತೆ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ತಹಸೀಲ್ದಾರ್ ಫಿರೋಜ್‌ಶಾ ಸೋಮನಕಟ್ಟಿ ಅಧಿಕಾರಿಗಳಿಗೆ ಎಚ್ಚರಿಸಿದರು.