ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ-ಸಂಸದ ಬೊಮ್ಮಾಯಿಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಜಮೀನು ನೀಡಿರುವುದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ. ಇದು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವಂಥಾದ್ದು , ಇದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಇದರಲ್ಲಿ ಏನೋ ವ್ಯವಹಾರ ಕುದುರಿದೆ ಎಂಬ ಸಂದೇಹ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.