ಕಾರ್ಮಿಕರಿಗೆ ಕನಿಷ್ಠ 36 ಸಾವಿರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆಡಿವೈಎಫ್ಐ ಮುಖಂಡ ಬಸವರಾಜ ಪೂಜಾರ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ. ಇವುಗಳನ್ನು ರದ್ದುಪಡಿಸಬೇಕು ಹಾಗೂ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಮಾಸಿಕ ₹36 ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.