16ರಂದು ರೈತರಿಂದ ಸುವರ್ಣಸೌಧ ಮುತ್ತಿಗೆರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಎದುರು ಡಿ. 16ರಂದು ರಾಜ್ಯದ ವಿವಿಧ 23 ರೈತ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ರಾಜ್ಯ ಸಂಚಾಲಕ ಎಂ.ಎನ್ ಕೂಕನೂರ ಹೇಳಿದರು.