• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿಯ 4 ಕಡೆಗಳಲ್ಲಿ ರಸ್ತೆಗಳಿಗೆ ಬ್ರಿಡ್ಜ್‌ ನಿರ್ಮಾಣ: ಶಾಸಕ ಶಿವಣ್ಣನವರ
ಸೇತುವೆ (ಬ್ರಿಡ್ಜ್ ) ಇಲ್ಲದೇ ಮಳೆಯಿಂದಾದ ಅನಾಹುತಕ್ಕೆ ನೂರಾರು ಎಕರೆ ಕೃಷಿಭೂಮಿಯಲ್ಲಿನ ಬೆಳೆನಾಶವಾಗಿದ್ದು ಸಂತ್ರಸ್ತ ರೈತರ ನೆರವಿಗೆ ಸ್ಪಂದಿಸಿದ್ದು ಮಾಸಣಗಿ, ಶಂಕರೀಪುರ, ಹಿರೇಹಳ್ಳಿ ಸೇರಿದಂತೆ ತಾಲೂಕಿನ 4 ಕಡೆಗಳಲ್ಲಿ ರಸ್ತೆಗಳಿಗೆ ಸೇತುವೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಬರುವ ಆರ್ಥಿಕ ವರ್ಷದಲ್ಲಿ ಇದಕ್ಕೆ ಅನುಮೋದನೆ ಸಿಗಲಿದ್ದು ಕಾಮಗಾರಿ ಆರಂಭಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಪಟ್ಟಣದ ತಾಪಂ ಆವರಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಿಳಿಸಿದರು.
ಬ್ಯಾಂಕ್‌ ಉಳಿತಾಯ ಖಾತೆ ಮಾಹಿತಿ ಗೌಪ್ಯವಾಗಿಡಿ-ವರಪ್ರಸಾದ ತ್ರಿವೇದಿ
ಯಾವುದೇ ಬ್ಯಾಂಕಿನವರು ಗ್ರಾಹಕರಿಗೆ ಓಟಿಪಿ ಬಗ್ಗೆ ಮಾಹಿತಿ ಕೇಳುವುದಿಲ್ಲ. ಬ್ಯಾಂಕ್ ಉಳಿತಾಯ ಖಾತೆಯ ಬಗ್ಗೆ ನಿಮ್ಮ ಮಾಹಿತಿ ಗೌಪ್ಯವಾಗಿಡಿ. ಇದರಿಂದ ನಿಮ್ಮ ಖಾತೆಯ ಹಣವೂ ಸುರಕ್ಷಿತವಾಗಿರುತ್ತದೆ ಎಂದು ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್ ವರಪ್ರಸಾದ ತ್ರಿವೇದಿ ಹೇಳಿದರು.
ಜಾನಪದ ವೈವಿಧ್ಯತೆ ಉಳಿಸಿ ಬೆಳೆಸುವ ಜವಾಬ್ದಾರಿ ವಿವಿ ಮೇಲಿದೆ-ಸಚಿವ ಡಾ. ಎಂ.ಸಿ. ಸುಧಾಕರ
ನಮ್ಮಲ್ಲಿ ವೈವಿಧ್ಯತೆ ಇದೆ, ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಜೀವನದ ಪ್ರತಿ ಹಂತದಲ್ಲಿ ವೈವಿಧ್ಯತೆ ಕಾಣುತ್ತದೆ, ಪ್ರಪಂಚದ ಬೇರೆ ದೇಶಗಳನ್ನು ನೋಡಿದಾಗ ನಮ್ಮ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಪ್ರತಿಭೆ ಅಗಾಧವಾಗಿದೆ. ಜಾನಪದ ವೈವಿಧ್ಯತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಜಾನಪದ ವಿಶ್ವವಿದ್ಯಾಲಯದ ಮೇಲಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅಭಿಪ್ರಾಯಪಟ್ಟರು.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪ್‌ಮೆಂಟ್‌ಗೆ ₹ 2 ಕೋಟಿ-ಸಚಿವ ಸುಧಾಕರ
ಶೈಕ್ಷಣಿಕ ಸ್ಪರ್ಧಾತ್ಮಕ ಯುಗದಲ್ಲಿ ನಾವಿದ್ದೇವೆ, ಬಹುಬೇಗನೆ ಬದುಕನ್ನು ಕಟ್ಟಿಕೊಳ್ಳುವ ಆಸೆಯೊಂದಿಗೆ ಬಹುತೇಕ ಮಕ್ಕಳು ತಾಂತ್ರಿಕ ಶಿಕ್ಷಣದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಪಟ್ಟಣದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪಮೆಂಟ್‌ಗಾಗಿ ₹ 2 ಕೋಟಿ ನೀಡುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ಹೇಳಿದರು.
ದಿನಾ ಹಾವೇರಿಗೆ ಹೋಗೋದು ಬಿಡ್ರಿ, ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ
ದಿನಾ ಹಾವೇರಿಗೆ ಹೋಗೋದು ಬಿಡ್ರಿ, ತಾಲೂಕಿನ ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ, ಆರೋಗ್ಯ ಇಲಾಖೆಯ ಆಸ್ಪತ್ರೆಗಳೇ ಕಸದ ಗುಡ್ಡಿ ಆಗ್ಯಾವ, ನಿಮ್ಮ ನಿರ್ಲಕ್ಷ್ಯಕ್ಕೆ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ತಾಲೂಕು ಆರೋಗ್ಯಾಧಿಕಾರಿ ಡಾ.ಲಿಂಗರಾಜ ಅವರಿಗೆ ಎಚ್ಚರಿಕೆ ನೀಡಿದರು.
ಹಾವೇರಿ ನಗರದವರೆಗೂ ಬಸ್‌ಪಾಸ್ ಸೌಲಭ್ಯ ವಿಸ್ತರಿಸುವಂತೆ ಆಗ್ರಹ
ಹಾವೇರಿ ತಾಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಬಸ್‌ಪಾಸ್ ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ, ಗ್ರಾಮೀಣ ಭಾಗದ ಬಸ್ ಸಮಸ್ಯೆಗಳ ಪರಿಹಾರಕ್ಕಾಗಿ ಹಾಗೂ ನಗರ ಸಾರಿಗೆ ಪ್ರಾರಂಭಿಸಲು ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗಾಂಧಿಪುರ ಕಾಲೇಜ್ ಎದುರು ಪ್ರತಿಭಟಿಸಿದರು.
ಹಾವೇರಿ ಮೆಡಿಕಲ್ ಕಾಲೇಜಿಗೆ ಎರಡು ಮೃತದೇಹ ದಾನ
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಮೂಲಕ ಹಾವೇರಿ ಮೆಡಿಕಲ್ ಕಾಲೇಜಿಗೆ, ವೈದ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆಂದು ಎರಡು ಮೃತದೇಹಗಳನ್ನು ದಾನ ನೀಡಲಾಯಿತು.
ಜಾನಪದ ಸಂಸ್ಕೃತಿ ಸಂರಕ್ಷಣೆ ಮಾಡುವುದು ಅನಿವಾರ್ಯ-ಕುಲಪತಿ ಪ್ರೊ. ಕಟ್ಟೀಮನಿ
ಜಾನಪದ ಸಂಸ್ಕೃತಿ ಜೀವನದ ಸಂಪೂರ್ಣತೆ ಪ್ರತಿಬಿಂಬಿಸುತ್ತದೆ. ಹಳೆಯ ಶತಮಾನಗಳಿಂದ ಉಳಿದುಕೊಂಡು ಬಂದಿರುವ ರೂಢಿಗಳು, ಪದ್ಧತಿಗಳು, ನಂಬಿಕೆ ವ್ಯವಸ್ಥೆಗಳು ಸಮುದಾಯದ ಒಟ್ಟಾರೆ ಕಲ್ಯಾಣಕ್ಕಾಗಿ ಮತ್ತು ಮುಂದಿನ ಪೀಳಿಗೆಯ ತಿಳುವಳಿಕೆಗಾಗಿ ಸಂರಕ್ಷಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಆಂಧ್ರಪ್ರದೇಶದ ವಿಜಯನಗರಂನ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ವಿ. ಕಟ್ಟೀಮನಿ ಹೇಳಿದರು.
ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇದಿಕೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ಶಾಸಕ ಪಠಾಣ ದರ್ಪ
ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇದಿಕೆಗೆ ನನ್ನನ್ನು ಆಹ್ವಾನಿಸಿಲ್ಲ. ಯಾರೂ ನನ್ನನ್ನು ಸ್ವಾಗತಿಸಲಿಲ್ಲ ಎಂದು ಸಿಟ್ಟಾದ ನೂತನ ಶಾಸಕ ಯಾಸೀರ್ ಖಾನ್ ಪಠಾಣ ವಿವಿ ಸಿಬ್ಬಂದಿ ಮೇಲೆ ಹರಿಹಾಯ್ದ ಪ್ರಸಂಗ ಸೋಮವಾರ ನಡೆಯಿತು.
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವ, 6 ಗಣ್ಯರಿಗೆ ಗೌರವ ಡಾಕ್ಟರೇಟ್
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ೮ ಮತ್ತು ೯ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಡಿ. ೨ರಂದು ಬೆಳಗ್ಗೆ ೧೧.೩೦ಕ್ಕೆ ಜಾನಪದ ವಿಶ್ವವಿದ್ಯಾಲಯ ಆವರಣದ ಹಿರೇತಿಟ್ಟು ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ. ಭಾಸ್ಕರ ಹೇಳಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved