15ರಂದು ಮುಖ್ಯರಸ್ತೆ ಎರಡೂ ಕಡೆಗಳಲ್ಲಿ ಬೃಹದಾಕಾರದ ತಗ್ಗುಗಳ ನಿರ್ಮಾಣಮುಖ್ಯರಸ್ತೆ ಅಗಲೀಕರಣಕ್ಕಾಗಿ ಕಳೆದ 15 ವರ್ಷದಿಂದ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದು ಯಾವುದೇ ಕಾರ್ಯರೂಪಕ್ಕೆ ಬಂದಿಲ್ಲ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಮ್ಮ ತಾಳ್ಮೆ ಪರೀಕ್ಷಿಸುತ್ತಿದ್ದು ಶಾಸಕರು ನೀಡಿದ ಗಡುವು ಆ.15ಕ್ಕೆ ಕೊನೆಗೊಳ್ಳಲಿದ್ದು, ಅಂದಿನಿಂದಲೇ ಮುಖ್ಯರಸ್ತೆಯಲ್ಲಿ ಬೃಹತ್ ತಗ್ಗುಗಳನ್ನು ತೆಗೆದು ಶಾಶ್ವತವಾಗಿ ಸ್ಥಗಿತಗೊಳಿಸಲಿದ್ದೇವೆ ಎಂದು ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ ಎಚ್ಚರಿಕೆ ನೀಡಿದರು.