ಹಾವೇರಿ ವಿವಿ ವ್ಯಾಪ್ತಿಯಲ್ಲಿ ಕ್ರೀಡೆಗಳ ಅಭಿವೃದ್ಧಿಗೆ ಕ್ರಮ: ಸೊರಟೂರಕುಲಪತಿಗಳ ಮಾರ್ಗದರ್ಶನದಲ್ಲಿ ಹಾವೇರಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಕ್ರೀಡೆಗಳ ಅಭಿವೃದ್ಧಿಗೆ ಕ್ರೀಡಾಂಗಣ ನಿರ್ಮಾಣ ಮಾಡುವುದೂ ಸೇರಿದಂತೆ ಕ್ರೀಡಾಪಟುಗಳ ವೈಯಕ್ತಿಕ ಸಾಮರ್ಥ್ಯ ಹೆಚ್ಚಿಸುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ವರ್ಷದಿಂದಲೇ ಆರಂಭಿಸಿದ್ದಾಗಿ ಹಾವೇರಿ ವಿವಿ ಕ್ರೀಡಾ ವಿಭಾಗದ ನಿರ್ದೇಶಕ ಸಿ.ಎನ್. ಸೊರಟೂರ ಹೇಳಿದರು.