ತೋಟಗಾರಿಕಾ ಬೆಳೆ ವಿಮೆ ತಾಂತ್ರಿಕ ಸಮಸ್ಯೆ ಬಗೆಹರಿಸಲು ಶಾಸಕ ಮಾನೆ ಸೂಚನೆಬೆಳೆ ಸಮೀಕ್ಷೆ ನೋಂದಣಿ ಆಗದ ಕಾರಣ ತೋಟಗಾರಿಕೆ ಬೆಳೆಗಳಾದ ಮಾವು, ಅಡಕೆ ಸೇರಿದಂತೆ ಇತರ ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ಸಾಧ್ಯವಾಗುತ್ತಿಲ್ಲ. ಇದರಿಂದ ತೋಟಗಾರಿಕಾ ಬೆಳೆಗಾರರಿಗೆ ಅನ್ಯಾಯ ಉಂಟಾಗುತ್ತಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತಾಂತ್ರಿಕ ಸಮಸ್ಯೆ ಸರಿಪಡಿಸಿ ಬೆಳೆ ವಿಮೆ ಕಂತು ತುಂಬಲು ಅವಕಾಶ ಕಲ್ಪಿಸಲು ಪ್ರಯತ್ನಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರಗೆ ಸೂಚಿಸಿದರು.