ಸೋರುತ್ತಿರುವ ಹಾವೇರಿ ತಹಸೀಲ್ದಾರ್ ಕಚೇರಿ, ಭೂದಾಖಲೆಗಳ ಸಂರಕ್ಷಣೆಗೆ ಹರಸಾಹಸನಿರಂತರ ಮಳೆಯಿಂದ ಇಲ್ಲಿಯ ತಹಸೀಲ್ದಾರ್ ಕಾರ್ಯಾಲಯದಲ್ಲಿರುವ ಭೂದಾಖಲೆ ವಿಭಾಗ ಸೋರುತ್ತಿದ್ದು, ತಾಡಪಾಲ್ ಕಟ್ಟಿ ನೂರಾರು ವರ್ಷ ಹಳೆಯ ಕಂದಾಯ ದಾಖಲೆಗಳನ್ನು ಸಂರಕ್ಷಿಸಲು ಸಿಬ್ಬಂದಿ ಹೆಣಗಾಡುತ್ತಿದ್ದಾರೆ. ಗೋಡೆ, ಚಾವಣಿಯಿಂದ ಸೋರುವ ನೀರನ್ನು ಹೊರಹಾಕುವುದೇ ಸಿಬ್ಬಂದಿ ಕೆಲಸವಾಗಿದೆ.