ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಎಸ್ಪಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೀವು ತಪ್ಪಿತಸ್ಥರು ಎಂದು ಹೈಕೋರ್ಟ್ ಹೇಳಿದೆ. ಯಡಿಯೂರಪ್ಪ ಅವರಿಗೆ ಯಾವುದೇ ಕೋರ್ಟ್ ರಾಜಿನಾಮೆ ಕೊಡುವಂತೆ ಹೇಳಿರಲಿಲ್ಲ. ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಇವತ್ತು ವಕ್ಫ್ ಮೂಲಕ ನಿಮ್ಮ ಆಸ್ತಿ, ಹೊಲ, ಮಠಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮುಂದೊಂದು ದಿನ ಹಿಂದೂಗಳನ್ನೂ ಮುಗಿಸುವ ಕೆಲಸವಾಗುತ್ತದೆ. ಆದ್ದರಿಂದ, ನಾವು ಒಂದಾಗದಿದ್ದರೆ ಮುಂದೆ ಭವಿಷ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಅಬಕಾರಿ ಇಲಾಖೆಯಿಂದ ₹ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯವರು ನಮ್ಮ ಮೇಲೆ ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಮೋದಿ ಅವರು ಹೇಳಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು