ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ಹುದ್ದೆ ನೇಮಕಕ್ಕೆ ಆಕ್ಷೇಪಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ೩೧೦ ಪ್ರಾಂಶುಪಾಲರ ಹುದ್ದೆಗಳ ನೇರ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆಯ ಮೂಲಕ, ಐದು ವರ್ಷಗಳ ಅವಧಿಗೆ ಮಾತ್ರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ರಾಜ್ಯ ಸಮಿತಿ ವಿರೋಧಿಸುತ್ತದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.