ತೈಲಬೆಲೆ ಹೆಚ್ಚಳಕ್ಕೆ ಬಿಜೆಪಿ ಆಕ್ಷೇಪ ಸರಿಯಲ್ಲ-ರಾಜು ಕುನ್ನೂರಕಳೆದ ಹತ್ತು ವರ್ಷಗಳಲ್ಲಿ ಪೆಟ್ರೋಲ್ ಬೆಲೆಯನ್ನು ಎರಡರಿಂದ ಮೂರು ಪಟ್ಟು ಮತ್ತು ಡೀಸೆಲ್ ಬೆಲೆಯನ್ನು ಐದರಿಂದ ಹತ್ತು ಪಟ್ಟು ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಡುಹಗಲೇ ಜನರನ್ನು ಸುಲಿಗೆ ಮಾಡಿದರೂ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಗರು ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮೂರು ರುಪಾಯಿ ಹೆಚ್ಚಿಸಿದ್ದಕ್ಕೆ ಎದೆ ಬಡಿದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಪ್ರತಿಕ್ರಿಯೆಸಿದ್ದಾರೆ.