• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯ ಕಲ್ಪಿಸುವಂತೆ ಹಣ ಕಳೆದುಕೊಂಡ ಸಂತ್ರಸ್ತರ ಹೋರಾಟ
ಹಣ ಡಬಲ್ ಮಾಡುತ್ತೇವೆ ಎಂದು ನಂಬಿಸಿ ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರು. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ (ತಗಿ ಪೀಡಿತ ಜಮಾಕರ್ತ ಪರಿವಾರ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಒಂದು ತಿಂಗಳಿನಿಂದ ಅನಿರ್ದಿಷ್ಟಾವಧಿ ಚಳವಳಿ ಮುಂದುವರಿಸಿದ್ದಾರೆ.
ಸಿಎಂ ಸ್ಥಾನದಿಂದ ಸಿದ್ದು ಕೆಳಗಿಳಿಸಲು ವಿರೋಧಿಗಳ ಷಡ್ಯಂತ್ರ
ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಸಹಿಸಿಕೊಳ್ಳಲಾಗದ ವಿರೋಧಿಗಳು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಎಲ್ಲಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ, ಅದು ಸಫಲವಾಗುವುದಿಲ್ಲ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಮಕ್ಕಳಲ್ಲಿ ಇಚ್ಛಾಶಕ್ತಿ ಬೆಳೆಸುವ ಅಗತ್ಯವಿದೆ-ಡಾ. ಪ್ರಕಾಶಗೌಡ ಪಾಟೀಲ
ಮಕ್ಕಳನ್ನು ಶೈಕ್ಷಣಿಕವಾಗಿ ಬೆಳೆಸುವ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗಟ್ಟಿಯಾಗಿ ಮುನ್ನಡೆಯುವ ಇಚ್ಛಾಶಕ್ತಿಯನ್ನು ಬೆಳೆಸುವ ಅಗತ್ಯವಿದೆಯಲ್ಲದೆ, ಸಮುದಾಯಕ ಹಿತಕ್ಕೆ ಮೇಲು ಕೀಳಿಲ್ಲದೆ ಎಲ್ಲರೂ ಒಟ್ಟಾಗಿ ಶ್ರಮಿಸಿದಾಗ ಯಶಸ್ಸು ಸಾಧ್ಯ ಎಂದು ಹಾನಗಲ್ಲ ತಾಲೂಕು ಸಾದರು ಸಮಾಜದ ಹಿತವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಕಾಶಗೌಡ ಪಾಟೀಲ ತಿಳಿಸಿದರು.
ಐತಿಹಾಸಿಕ ಪರಂಪರೆ ಮುಂದಿನ ಪೀಳಿಗೆಗೂ ತಲುಪಿಸಿ-ತಹಸೀಲ್ದಾರ್‌ ರೇಣುಕಾ
ನಮ್ಮ ಐತಿಹಾಸಿಕ ಪರಂಪರೆ ಹಾಗೂ ಸಂಪ್ರದಾಯಗಳನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾಡಹಬ್ಬವನ್ನು ನಮ್ಮ ಧಾರ್ಮಿಕ ಹಾಗೂ ಸಂಸ್ಕೃತಿಯ ಆಚರಣೆಗಾಗಿ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ತಹಸೀಲ್ದಾರ್ ಎಸ್. ರೇಣುಕಾ ಕರೆ ನೀಡಿದರು.
ವೀರಶೈವ ಲಿಂಗಾಯತರಲ್ಲಿ ಅಭಿಮಾನ ಶೂನ್ಯತೆ ಸಲ್ಲದು-ಶಂಕರ ಬಿದರಿ
ರಾಜ್ಯದ ಬಹುತೇಕ ಜನರಿಗೆ ಅನ್ನ, ಶಿಕ್ಷಣ, ಉದ್ಯೋಗ ನೀಡುವ ಮೂಲಕ ಉದಾರತೆ ತೋರುತ್ತಿದೆ. ಆದರೆ ನಮ್ಮಲ್ಲಿರುವ ಅಭಿಮಾನದ ಶೂನ್ಯತೆಯಿಂದ ರಾಜ್ಯದಲ್ಲಿ 3 ಕೋಟಿಗೂ ಅಧಿಕ ವೀರಶೈವ ಲಿಂಗಾಯತ ಸಮಾಜ ಅಲ್ಪ ಸಂಖ್ಯಾತರಂತೆ ಕಾಣುತ್ತಿದ್ದೇವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಖೇದ ವ್ಯಕ್ತಪಡಿಸಿದರು.
ರೈತರ ನೆರವಿಗಾಗಿ ರಾಜ್ಯಾದ್ಯಂತ ಶೀತಲೀಕರಣ ಘಟಕ ನಿರ್ಮಾಣ-ಸಚಿವ ಶಿವಾನಂದ ಪಾಟೀಲ
ರೈತರು ತಮ್ಮ ಬೆಳೆಯನ್ನು ಸಂರಕ್ಷಿಸಿ ಮೌಲ್ಯವರ್ಧನೆ ಮೂಲಕ ಮಾರಾಟ ಮಾಡಿದಾಗ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ರೈತ ಸಮುದಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಹೊಸದಾಗಿ ಶೀತಲೀಕರಣ ಘಟಕ ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಾಡಹಬ್ಬವು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆ: ಸಾಹಿತಿ ಶಂಭು ಬಳಿಗಾರ
ಕನ್ನಡ ನಾಡಿನಲ್ಲಿ ವಿಶಿಷ್ಟವಾಗಿ ಆಚರಿಸುತ್ತಿರುವ ನಾಡಹಬ್ಬವು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಜೀವಂತ ಪಳೆಯುಳಿಕೆಯಾಗಿದ್ದು ಪ್ರಾಚೀನ ಮತ್ತು ಐತಿಹಾಸಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಿದೆ. ಅವುಗಳ ಉಳಿವು ಮತ್ತು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ಪ್ರತಿ ನಾಗರಿಕನ ಮೇಲಿದೆ ಎಂದು ಇಳಕಲ್‌ನ ಜಾನಪದ ವಿದ್ವಾಂಸ ಶಂಭು ಬಳಿಗಾರ ಹೇಳಿದರು.
ದೇಶದ ಜಿಡಿಪಿ ಆರ್ಥಿಕತೆಗೆ ಛಾಯಾಗ್ರಹಣ ಕ್ಷೇತ್ರ ಬೆನ್ನೆಲುಬಾಗಿದೆ-ಡಾ. ಮಂಜುನಾಥ
ದೇಶದ ಜಿಡಿಪಿ ಆರ್ಥಿಕತೆಗೆ ಛಾಯಾಗ್ರಹಣ ಕ್ಷೇತ್ರ ಬೆನ್ನೆಲುಬಾಗಿದೆ. ಭಾರತದಲ್ಲಿ 4 ಲಕ್ಷಕ್ಕೂ ಅಧಿಕ ವೃತ್ತಿನಿರತ ಛಾಯಾಗ್ರಾಹಕರು ಇದ್ದು, 40 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದಾರೆ. ಪ್ರತಿವರ್ಷ 132 ಸಾವಿರ ಕೋಟಿ ದೇಣಿಗೆಯನ್ನು ಛಾಯಾಗ್ರಹಣ ಕ್ಷೇತ್ರ ಭಾರತಕ್ಕೆ ನೀಡುತ್ತಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ಛಾಯಾಗ್ರಾಹಕ ಡಾ. ಎಚ್.ಬಿ. ಮಂಜುನಾಥ ಹೇಳಿದರು.
ಶಿಕ್ಷಕರು ನಿರಂತರ ಅಧ್ಯಯನಶೀಲರಾಗಿರಬೇಕು-ಡಾ. ಕುಬೇರಪ್ಪ
ಶಿಕ್ಷಕರು ನಿರಂತರ ಅಧ್ಯಯನಶೀಲರಾಗಿ, ಜ್ಞಾನದಖಣಿಯಾಗಿ ಹಾಗೂ ತಪಸ್ವಿಯಂತೆ ಶಿಕ್ಷಣ ಪಡೆದು ಸಮಾಜ ಸೇವೆಗೆ ಮುಂದಾಗಬೇಕು ಎಂದು ಬಿಎಜೆಎಸ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಆರ್.ಎಂ. ಕುಬೇರಪ್ಪ ಹೇಳಿದರು.
ಹಿರಿಯರಿಗೆ ಗೌರವ ನೀಡದಿದ್ದಲ್ಲಿ ನಮ್ಮಬದುಕು ಮತ್ತು ಸಾಧನೆ ಶೂನ್ಯ: ನ್ಯಾ. ಅಮೋಲ್ ಹಿರಿಕುಡೆ
ಹಿರಿಯರಿಗೆ ಗೌರವ ನೀಡದಿದ್ದಲ್ಲಿ ನಮ್ಮಬದುಕು ಮತ್ತು ಸಾಧನೆ ಶೂನ್ಯ. ಮನೆಯಲ್ಲಿನ ಹಿರಿಯರ ಮಾರ್ಗದರ್ಶನವಿಲ್ಲದೇ ನಮ್ಮ ಭವಿಷ್ಯ ಡೋಲಾಯಮಾನ ಎಂಬುದನ್ನು ನಾವೆಲ್ಲರೂ ಅರಿತು ನಡೆಯಬೇಕಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯಪಟ್ಟರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved