ನೀಟ್ ಪರೀಕ್ಷೆ ಅವ್ಯವಹಾರ ನಿಷ್ಪಕ್ಷಪಾತ ತನಿಖೆಗೆ ಆಗ್ರಹವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇತರೆ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗಳನ್ನು ನಡೆಸುವ ಬಗ್ಗೆ ಪಾರದರ್ಶಕತೆಯನ್ನು ಪ್ರಶ್ನಿಸುವ ಹಲವಾರು ದೂರುಗಳು ದೇಶಾದ್ಯಂತ ಬರುತ್ತಿವೆ. ಈ ಹಗರಣದ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಎಸ್‌ಎಫ್‌ಐ ಜಿಲ್ಲಾ ಸಮಿತಿ ಒತ್ತಾಯಿಸಿದೆ.