ಮತ ಎಣಿಕೆ ಕುತೂಹಲ, ಎಲ್ಲರ ಚಿತ್ತ ಫಲಿತಾಂಶದತ್ತಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಎದೆಯಲ್ಲಿ ಡವಡವ ಶುರುವಾಗಿದ್ದು, ಎರಡೂ ಕಡೆಯ ಕಾರ್ಯಕರ್ತರು ಸೋಲು-ಗೆಲುವಿನ ಚರ್ಚೆಯಲ್ಲಿ ಮುಳುಗಿದ್ದಾರೆ. ಸಾರ್ವಜನಿಕರೂ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯತೊಡಗಿದ್ದಾರೆ.