ಹೊರಗುತ್ತಿಗೆಯಲ್ಲಿ ಮೀಸಲಾತಿ, ಎಸ್ಸಿ-ಎಸ್ಟಿಗಳಿಗೆ ಅನ್ಯಾಯ: ಡಿ.ಎಸ್. ಮಾಳಗಿಸರ್ಕಾರಿ, ಅರೆ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆ ಆಯ್ಕೆ ಮಾಡಿಕೊಳ್ಳುವ ವೇಳೆ ಮೀಸಲಾತಿ ಅನುಸರಿಸುವ ಸರ್ಕಾರದ ನಿರ್ಣಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರೋಧಿಯಾಗಿದೆ ಎಂದು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಮತ್ತಿತರ ದಲಿತ ಮುಖಂಡರು ಆಕ್ಷೇಪಿಸಿದ್ದಾರೆ.