31ರಂದು ಶಾಲಾ ಪ್ರಾರಂಭೋತ್ಸವ: ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಮೇ.31ರಂದು ನಡೆಯಲಿದ್ದು, ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಇಲಾಖೆ ವಿತರಿಸುತ್ತಿರುವ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಂಡು ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಕರೆ ನೀಡಿದರು.