ಮಾದಿಗ ಸಮಾಜದಿಂದ ನಾಳೆ ತಮಟೆ ಚಳವಳಿಮಾದಿಗ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಇದನ್ನು ಖಂಡಿಸಿ ಸೆ.೧೯ರಂದು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಹಲಗೆ, ತಮಟೆ ಬಾರಿಸುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಸಮಾಜದ ಮುಖಂಡ, ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಹೇಳಿದರು.