ಸಮಾಜದಲ್ಲಿ ಒಟ್ಟಾಗಿ ಬದುಕುವ ಸಂಸ್ಕಾರ ನಮ್ಮದಾಗಬೇಕು-ಜ್ವಾಲಾಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಬರುವ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಒಟ್ಟಾಗಿ ದುಡಿಯುವ, ದುಡಿದ ಹಣವನ್ನು ಸದುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತರಾಗಿದ್ದಾರೆ. ಇದರೊಂದಿಗೆ ನಮ್ಮ ಮನೆಗಳನ್ನು ನಂದನವನಗಳಂತೆ ಸಂಸ್ಕಾರಯುತವಾಗಿ ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜ್ವಾಲಾ ಹೇಳಿದರು.