ಕೊಲೆ, ಅತ್ಯಾಚಾರ, ದೌರ್ಜನ್ಯ, ಹತ್ಯೆಗೀಡಾದವರಿಗೆ ನ್ಯಾಯ ಒದಗಿಸಲು ಆಗ್ರಹನೇಹಾ ಹತ್ಯೆ ಖಂಡಿಸಿ ಹಾಗೂ ಸೌಜನ್ಯ, ರುಕ್ಸಾನಾ, ದಾನಮ್ಮ ಸೇರಿದಂತೆ ಕೊಲೆ, ಅತ್ಯಾಚಾರ, ದೌರ್ಜನ್ಯ, ಹತ್ಯೆಗೀಡಾದವರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ನಗರದ ಬಸ್ ನಿಲ್ದಾಣದ ಬಳಿ ಎಸ್ಎಫ್ಐ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟಿಸಿ ತಹಸೀಲ್ದಾರ್ ಟಿ. ಸುರೇಶಕುಮಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.