ದೇಶ ಒಗ್ಗೂಡಿಸಲು ವಲ್ಲಭಭಾಯಿ ಪಟೇಲ್ ಕೊಡುಗೆ ಅಪಾರ-ಪ್ರೊ. ಭಾಸ್ಕರ್ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ, ಐಕ್ಯತೆ, ಸಾಮರಸ್ಯ ದೇಶದಲ್ಲಿ ಶಾಶ್ವತವಾಗಿ ನೆಲೆ ನಿಂತಿದೆ. ದೇಶವನ್ನು ಆಡಳಿತಾತ್ಮಕವಾಗಿ ಮತ್ತು ಸಾಂಸ್ಕೃತಿಕವಾಗಿ ಒಗ್ಗೂಡಿಸಲು ಅವರ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಅವರು ಹೇಳಿದರು.