ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ರುದ್ರಪ್ಪ ಲಮಾಣಿಲಂಬಾಣಿ ಸಮುದಾಯದ ಏಕೈಕ ಶಾಸಕ ನಾನು. ಹಾಗಾಗಿ ಮೊದಲ ಅವಧಿಯಲ್ಲೇ ಸಚಿವ ಸ್ಥಾನ ಸಿಗಬೇಕಿತ್ತು. ಈಗ ವಿಧಾನಸಭೆ ಉಪ ಸಭಾಧ್ಯಕ್ಷರಾಗಿ, ಮುಂದಿನ ಅವಧಿಯಲ್ಲಿ ಸಚಿವ ಸ್ಥಾನ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಹಾಗಾಗಿ, ಅವರ ಮೇಲೆ ವಿಶ್ವಾಸ ಇಟ್ಟಿದ್ದೇನೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.