ಹಾವೇರಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಕಾರ್ಯನಿರ್ವಹಿಸಿ-ಟಿ.ಶ್ಯಾಮಭಟ್ಸಾರ್ವಜನಿಕ ಸೇವೆ ನೀಡುವ ಸಂಸ್ಥೆಗಳಲ್ಲಿನ ಅಧಿಕಾರಿಗಳು ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಂತೆ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಗೌರವದಿಂದ ಮಾತನಾಡಿ, ಮಾನವೀಯತೆಯಿಂದ ನಡೆದುಕೊಳ್ಳುವುದರಿಂದ ಶೇ.೯೦ರಷ್ಟು ಮಾನವ ಹಕ್ಕುಗಳ ಉಲ್ಲಂಘನೆ ತಡೆಯಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅಧಿಕಾರಿಗಳಿಗೆ ಹೇಳಿದರು.